ಹುಬ್ಬಳ್ಳಿ,ಅ,10,2018(www.justkannada.in): ಉಪ ಚುನಾವಣೆಯಲ್ಲಿ ಖಂಡಿತವಾಗಿ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ನಮ್ಮ ಅಭ್ಯರ್ಥಿಗಳು ಜಯ ಸಾಧಿಸುತ್ತಾರೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ, ಉಪಚುನಾವಣೆಯಲ್ಲಿ ಗೆಲುವು ನಮ್ಮದೇ ಆಗಲಿದೆ, ಜಮಖಂಡಿಯಲ್ಲಿ ಖಂಡಿತವಾಗಿಯೂ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ. ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಖಚಿತ ಎಂದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ೧೩೦ ಕೋಟಿಗೂ ಅಧಿಕ ಪಿಂಚಣಿ ಹಣ ಬಾಕಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಆರ್.ವಿ ದೇಶಪಾಂಡೆ, ಇದು ಹಳೆಯ ಸಮಸ್ಯೆ ನಾನು ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ಧಾರವಾಡದಲ್ಲಿ ಸಭೆಯಲ್ಲಿಯೂ ಚರ್ಚೆಗಳನ್ನು ಮಾಡಲಾಗಿದೆ. ಯಾವ ಸಮಯದಲ್ಲಿ ಏನು ಕೆಲಸಗಳಾಗಬೇಕೋ ಅದು ಆಗಬೇಕು. ಅವು ಆಗದೇ ಇದ್ದರೆ ಏನೂ ಮಾಡಲಾಗುವುದಿಲ್ಲ ಎಂದು ಸಚಿವ ಆರ್ .ವಿ.ದೇಶಪಾಂಡೆ ತಿಳಿಸಿದರು.
ಧಾರವಾಡ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಯಾವುದೇ ರೀತಿ ಧಾರವಾಡ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ. ಕಾರವಾರ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ನಿಜ. ಆದ್ರೆ ಧಾರವಾಡ ಜಿಲ್ಲೆಗೂ ಅಷ್ಟೇ ಪ್ರಾಶಸ್ತ್ಯ ನೀಡುತ್ತೇನೆ. ಕೆಲವು ದಿನಗಳ ಹಿಂದೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹರಿಸಲಾಗಿದೆ ಎಂದರು.
Key words: Our candidates- victory -by-election – sure-Minister RV Deshpande -confident.
The post ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ- ಸಚಿವ ಆರ್.ವಿ ದೇಶಪಾಂಡೆ ವಿಶ್ವಾಸ… appeared first on Just Kannada - Online Kannada News.